ಕರುಣಾಳು ಬಾ ಬೆಳಕೇ
ಮುಸುಕಿದೀ ಮಬ್ಬಿನಲಿ
ಕೈ ಹಿಡಿದು ನಡೆಸೆನ್ನನು
ಎಂದು ನಾನು ಹಾಡಿದಾಗ ಕತ್ತಲೆಯೇನು ಇರಲಿಲ್ಲ;
ಮಬ್ಬಿತ್ತು ಅಷ್ಟೆ.
ನೀನು ಬೆಳಕಾಗಿ ಬಂದೆ.
ನಾನು ಖುಷಿಯಲ್ಲಿ ಮುಳುಗಿಹೋದೆ.
ಗಾಳಿ ಬೀಸುವ ಮೊದಲು
ಬಾಗಿಲು
ಭದ್ರಗೊಳಿಸಿಕೊಳ್ಳಬೇಕು ಎಂಬ ಅರಿವು
ನನಗಾದಾಗ ತಡವಾಗಿತ್ತು.
ಜೋರು ಗಾಳಿ ಬೀಸತೊಡಗಿದಾಗ ಭಿನ್ನವಿಸಿಕೊಂಡೆ:
ದೀಪವೂ ನಿನ್ನದೆ
ಗಾಳಿಯೂ ನಿನ್ನದೆ
ಆರದಿರಲಿ ಬೆಳಕು..
ಬೆಳಕು ಉಳಿಯಲಿಲ್ಲ;
ಗಾಳಿ ಬಿಡಲಿಲ್ಲ.
ದೀಪವಾರಿದಾಕ್ಷಣ ಕತ್ತಲು
ಸುತ್ತಮುತ್ತಲೂ.
ಸಣ್ಣ ಬಿಳಿ ಹೊಗೆ ಎದ್ದಿತ್ತೇನೋ-
ಕಾಣಲಿಲ್ಲ ಕತ್ತಲೆಯಲ್ಲಿ.
ಒಳ್ಳೆಯದೇ ಆಯಿತು;
ನನಗೆ ಹೊಗೆ ಎಂದರೆ 'ಹೋಗೇ'.
ಈಗೆಲ್ಲ ಇಲ್ಲಿ ದೀಪ ಉಳಿಸಿ ಹೋದ
ಕಂಪಿನದೇ ರಾಜ್ಯಭಾರ.
ಮತ್ತು ನನ್ನ ಮಂತ್ರಪಠಣ:
ತಮಸೋಮಾ ಜ್ಯೋತಿರ್ಗಮಯ..
Friday, September 22, 2006
Monday, September 18, 2006
ಒಂದು ಪೂರ್ಣ ಕತೆ; ಒಂದು ಅಪೂರ್ಣ ಕತೆ..!
ಕೊಕ್ಕರೆ ಕಥೆ
ಒಮ್ಮೆ ಕೊಕ್ಕರೆಯೊಂದು ಕೆರೆಯಲ್ಲಿ ಮೀನುಗಳನ್ನು ಹೆಕ್ಕಿ ತಿನ್ನುತ್ತಿರುವಾಗ ಅಲ್ಲಿಗೆ ನರಿಯೊಂದು ಬಂತು. ಕೊಕ್ಕರೆ ಮೀನುಗಳನ್ನು ತಿನ್ನುತ್ತಾ ಸುಗ್ರಾಸ ಭೋಜನದಲ್ಲಿ ತೊಡಗಿರುವುದನ್ನು ಕಂಡು ನರಿಗೆ ಆಶೆಯಾಯಿತು. ಅದು ಕೊಕ್ಕರೆಯೊಂದಿಗೆ ಸ್ನೇಹ ಸಂಪಾದಿಸಲು ನೋಡಿತು. 'ಕೊಕ್ಕರೆಯಣ್ಣಾ ಕೊಕ್ಕರೆಯಣ್ಣಾ, ನೀನು ಅದೆಷ್ಟು ಸುಂದರವಾಗಿದ್ದೀಯೆ! ನಿನ್ನ ಮೈಬಣ್ಣ ಅದೆಷ್ಟು ಬಿಳಿ! ಕೋಮಲವಾದ ನಿನ್ನ ಮೈಮಾಟ, ನೀಳವಾದ ಕತ್ತು, ಊದ್ದ-ಚೂಪು ಕೊಕ್ಕು.. ಆಹಾ! ನೀನು ನಿಜಕ್ಕೂ ಸುಂದರಾಂಗ! ನೀನು ನೆಲದ ಮೇಲೆ ಓಡಬಲ್ಲೆಯಷ್ಟೇ ಅಲ್ಲ, ನೀರಿನಲ್ಲಿ ಈಜಬಲ್ಲೆ, ಆಕಾಶದಲ್ಲಿ ಹಾರಬಲ್ಲೆ.. ನನಗೋ, ಆ ಅದೃಷ್ಟ ಇಲ್ಲ...' ಎಂಬುದಾಗಿ ಕೊಕ್ಕರೆಯನ್ನು ಹೊಗಳಲು ಪ್ರಾರಂಭಿಸಿತು. ಕೊಕ್ಕರೆ ನರಿಯ ಹೊಗಳಿಕೆ ಮರುಳಾಯಿತು. ನರಿ ಮತ್ತು ಕೊಕ್ಕರೆ ಸ್ನೇಹಿತರಾದರು. ನರಿ ಹಸಿದಿರುವುದನ್ನು ತಿಳಿದ ಕೊಕ್ಕರೆ, ಒಂದಷ್ಟು ಮೀನುಗಳನ್ನು ಹೆಕ್ಕಿ ನರಿಗೆ ತಿನ್ನಲು ದಡಕ್ಕೆ ಹಾಕಿತು.
ನರಿ ಪ್ರತಿದಿನವೂ ಬರತೊಡಗಿತು. ಕೊಕ್ಕರೆ ನರಿಗೆ ಮೀನುಗಳನ್ನು ಹೆಕ್ಕಿ ಹೆಕ್ಕಿ ಕೊಡುತ್ತಿತ್ತು. ಒಂದು ದಿನ ನರಿ 'ಕೊಕ್ಕರೆಯಣ್ಣಾ, ನೀನು ನಮ್ಮ ಮನೆಗೆ ಒಮ್ಮೆಯೂ ಬಂದೇ ಇಲ್ಲವಲ್ಲ.. ನಾಳೆ ನೀನು ನಮ್ಮ ಮನೆಗೆ ಬಾ, ನನ್ನ ಹೆಂಡತಿ ನಿನಗಾಗಿ ಪಾಯಸ ಮಾಡುತ್ತಾಳೆ' ಎಂದು ಆಹ್ವಾನಿಸಿತು. ನರಿಯ ಕರೆಗೆ ಓಗೊಟ್ಟು ಕೊಕ್ಕರೆ ಮರುದಿನ ನರಿಯ ಮನೆಗೆ ಹೋಗುತ್ತದೆ. ನರಿ ಮತ್ತು ಕೊಕ್ಕರೆ ಮಾತನಾಡುತ್ತಾ ಕುಳಿತಿರುವಾಗ ನರಿಯ ಹೆಂಡತಿ ಒಂದು ಅಗಲವಾದ ಹರಿವಾಣದಲ್ಲಿ ಪಾಯಸವನ್ನು ಸುರಿದು ತಂದು ಕೊಕ್ಕರೆಯ ಮುಂದಿಡುತ್ತದೆ. ಇಬ್ಬರೂ ತಿನ್ನಲಾರಂಭಿಸುತ್ತಾರೆ. ಹರಿವಾಣದಲ್ಲಿ ತಳ ಮುಚ್ಚುವಷ್ಟೇ ಇದ್ದ ಪಾಯಸವನ್ನು ತಿನ್ನಲು ಕೊಕ್ಕರೆಗೆ ಆಗುವುದಿಲ್ಲ. ಅದು ತನ್ನ ಕೊಕ್ಕನ್ನು ಮುಳುಗಿಸಿದರೆ ಒಂದು ಚಮಚದಷ್ಟು ಮಾತ್ರ ಪಾಯಸ ಬಾಯಿಗೆ ಬರುತ್ತಿತ್ತು. ಹಾಗೇ ಅದು ಐದಾರು ಚಮಚ ತಿನ್ನುವುದರೊಳಗೆ ಆ ಕಡೆಯಿಂದ ನರಿ ಬಾಯಿ ಹಾಕಿ ಬರಬರನೆ ತಿನ್ನುತ್ತಾ ಪಾತ್ರೆಯನ್ನು ಖಾಲಿ ಮಾಡಿಬಿಟ್ಟಿತು! ನರಿ ಕೊಕ್ಕರೆಯನ್ನು 'ಹೇಗಿತ್ತು ಪಾಯಸ?' ಅಂತ ಕೇಳಿದ್ದಕ್ಕೆ, ಕೊಕ್ಕರೆ ಸಂಕೋಚಕ್ಕೆ ಬಲಿಯಾಗಿ 'ಚೆನ್ನಾಗಿತ್ತು' ಎಂದು ಹೇಳುತ್ತೆ. ಹಾಗೆಯೇ ಕೊಕ್ಕರೆ ನರಿಯನ್ನು ಮರುದಿನ ತಮ್ಮ ಮನೆಗೆ ಊಟಕ್ಕೆ ಬರುವಂತೆ ಆಹ್ವಾನಿಸುತ್ತದೆ.
ಮರುದಿನ ನರಿ ಕೊಕ್ಕರೆಯ ಮನೆಗೆ ಹೋಗುತ್ತದೆ. ಕೊಕ್ಕರೆ ಒಂದು ಪ್ಲಾನ್ ಮಾಡಿರುತ್ತದೆ. ಕೊಕ್ಕರೆ ಒಂದು ಚಿಕ್ಕ ಬೋಗುಣಿಯಲ್ಲಿ ಪಾಯಸವನ್ನು ಹಾಕಿ ತಂದಿಡುತ್ತದೆ. ನರಿಯ ಮೂತಿ ಅದರೊಳಗೆ ತೂರುವುದೇ ಇಲ್ಲ! ಕೊಕ್ಕರೆ ಸಲೀಸಾಗಿ ತನ್ನ ಕೊಕ್ಕಿನಿಂದ ಪಾಯಸವನ್ನು ಹೀರುತ್ತದೆ!
ಹೀಗೆ ಕೊಕ್ಕರೆ ನರಿಯ ಮೇಲೆ ಸೇಡು ತೀರಿಸಿಕೊಳ್ಳುತ್ತದೆ!
ಕಥೆ ಹೇಳಿದ್ದು: ವಿದ್ವಾನ್ ಶ್ರೀ ಎನ್. ರಂಘನಾಥ ಶರ್ಮ
ಸಂದರ್ಭ: ದಿನಾಂಕ ೧೭.೦೯.೨೦೦೬ ರಂದು ಗಿರಿನಗರದ ಶಂಕರ ಮಂಟಪದಲ್ಲಿ ನಡೆದ ಆರ್ಕುಟ್-ಹವ್ಯಕ ಚಕ್ಲಿ-ಚುಡ್ವಾ ಕಂಬಳ ದಲ್ಲಿ
ಉದ್ದೇಶ: ರಂಘನಾಥ ಶರ್ಮರನ್ನು ಕಾರ್ಯಕ್ರಮದ ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಲಾಗಿತ್ತು. ೯೨ ವರ್ಷ ವಯಸ್ಸಿನ, ಹಲ್ಲುಗಳೆಲ್ಲಾ ಬಿದ್ದು ಹೋಗಿರುವ ಅವರು, ಕಂಬಳವನ್ನು ಉದ್ಘಾಟಿಸುವುದೇನೋ ಸರಿ, ಆದರೆ ಚಕ್ಲಿಯನ್ನು ತಿನ್ನುವುದೆಂತು?! ಅವರು ತಮ್ಮ ಪರಿಸ್ಥಿತಿಯನ್ನು ಈ ಕಥೆಯೊಂದಿಗೆ ಹೊಂದಿಸಿ ರಸವತ್ತಾಗಿ ಹೇಳಿ ನೆರೆದಿದ್ದವರನ್ನೆಲ್ಲಾ ರಂಜಿಸಿದರು. ಕೊನೆಗೆ ಅವರಿಗೆ ಚಕ್ಲಿಯನ್ನು ಪುಡಿ ಮಾಡಿ ತಿನ್ನಿಸಲಾಯಿತು ಅನ್ನುವುದು ಬೇರೆ ವಿಷಯ!
***
ಈ ಕಥೆಯನ್ನು ಕೇಳುತ್ತಿದ್ದಾಗ ನನಗೆ ನೆನಪಾದದ್ದು, ನಾವೆಲ್ಲಾ ಬಾಲ್ಯದಲ್ಲಿ ಕೇಳಿದ 'ಕಾಗಕ್ಕ-ಗುಬ್ಬಕ್ಕನ ಕಥೆ'. ಸರಳವಾಗಿ ಹೇಳುವುದಾದರೆ, ಆ ಕಥೆ ಹೀಗಿದೆ:
ಕಾಗಕ್ಕ-ಗುಬ್ಬಕ್ಕ ಕಥೆ
ಒಂದೂರಲ್ಲಿ ಕಾಗಕ್ಕ ಮತ್ತೆ ಗುಬ್ಬಕ್ಕ ಫ್ರೆಂಡ್ಸ್ ಆಗಿರ್ತಾರೆ. ಕಾಗಕ್ಕನ ಮನೆ ಮಣ್ಣು ಮತ್ತೆ ತರಗೆಲೆಗಳಿಂದ ಮಾಡಿದ್ದು; ಗುಬ್ಬಕ್ಕನ ಮನೆ ಮರದ ತೊಗಟೆಯಿಂದ ಕಟ್ಟಿದ ಗಟ್ಟಿಮುಟ್ಟಾದ ಮನೆ. ಒಮ್ಮೆ ಜೋರು ಗಾಳಿ-ಮಳೆಯಾದಾಗ ಕಾಗಕ್ಕನ ಮನೆ ತೊಳೆದು ಹೋಗುತ್ತದೆ. ಆಗ ಗುಬ್ಬಕ್ಕ ಕಾಗಕ್ಕನನ್ನು ತನ್ನ ಮನೆಗೆ ಉಳಿದುಕೊಳ್ಳುವುದಕ್ಕೆ ಆಹ್ವಾನಿಸುತ್ತದೆ.
ರಾತ್ರಿ ಎಲ್ಲರೂ ಮಲಗಿದ್ದಾಗ ಕಾಗಕ್ಕ ಗುಬ್ಬಕ್ಕನ ಮೊಟ್ಟೆ-ಮರಿಗಳನ್ನು ತಿನ್ನಲಾರಂಭಿಸುತ್ತದೆ. 'ಕಟ್ ಕಟ್' 'ಕರ ಕರ' ಎಂಬ ಶಬ್ದ ಕೇಳಿ ಗುಬ್ಬಕ್ಕ ಕೇಳುತ್ತೆ: 'ಏನದು ಶಬ್ದ ಕಾಗಕ್ಕಾ?' ಅಂತ. ಅದಕ್ಕೆ ಕಾಗಕ್ಕ ಹೇಳುತ್ತೆ: 'ಏನಿಲ್ಲ, ದನ ಕಾಯೋ ಹುಡುಗ ನಾಕು ಕಡ್ಲೇಕಾಯಿ ಕೊಟ್ಟಿದ್ದ, ತಿನ್ತಾ ಇದ್ದೆ' ಅಂತ. ಬೆಳಗ್ಗೆ ಮುಂಚೆ, ಗುಬ್ಬಕ್ಕ ಏಳೋ ಮೊದಲೇ ಕಾಗಕ್ಕ ಗುಬ್ಬಕ್ಕನ ಗೂಡಿಂದ ಹಾರಿಹೋಗಿಬಿಡುತ್ತೆ.
ಗುಬ್ಬಕ್ಕ ಬೆಳಗ್ಗೆ ಎದ್ದು ನೋಡುತ್ತೆ: ಕಾಗಕ್ಕನೂ ಇಲ್ಲ; ತನ್ನ ಮೊಟ್ಟೆ-ಮರಿಗಳೂ ಇಲ್ಲ! ಕಾಗಕ್ಕನ ಮೇಲೆ ಅದು ಸೇಡು ತೀರಿಸಿಕೊಳ್ಳಬೇಕು ಅಂತ ತೀರ್ಮಾನಿಸುತ್ತೆ...
***
ಆದರೆ friends, ಇದರ ಮುಂದೆ ಮರೆತು ನನಗೆ ಹೋಗಿದೆ! ನನ್ನ ಗೆಳೆಯರನೇಕರ ಬಳಿ ಕೇಳಿದೆ; ಅವರಿಗೂ ನೆನಪಿಲ್ಲ. ಗುಬ್ಬಕ್ಕ ಕಾಗಕ್ಕನ ಮೇಲೆ ಹೇಗೆ ಸೇಡು ತೀರಿಸಿಕೊಳ್ಳೊತ್ತೆ ಅಂತ ನನಗೆ ಬೇಕು. Second part of the storey ಬೇಕು. ದಯವಿಟ್ಟು ಗೊತ್ತಿರೋರು ಈ ಕಥೆಯನ್ನು ಪೂರ್ಣಗೊಳಿಸಿಕೊಡಬೇಕು ಅಂತ ನನ್ನ ವಿನಂತಿ..

Friday, September 15, 2006
ಕೊಲೆಗಾರನ ಕಳವಳ
ನಿನ್ನೆ ರಾತ್ರಿ ಏನಾಯಿತೆಂದರೆ....
ಇಲ್ಲ, ಹೆದರಬೇಡಿ, ಅಂಥದ್ದೇನೂ ಆಗಲಿಲ್ಲ-
ಹೇಳಿಕೊಳ್ಳುವಂತದ್ದು;
ಆದರೆ ತಾಳಿಕೊಳ್ಳಲೂ ಆಗಲಿಲ್ಲ-
ಬಾಳೆಕಾಯಿ ಶೆಟ್ಟಿ ಎಂಬ ಹಸಿರು ಹುಳ
ನಾನು ದೀಪವಾರಿಸಿ ಮಲಗಿದ ಮೇಲೆ ಒಳ
ಬಂದು ಪಟಪಟ ಶಬ್ದ ಮಾಡುತ್ತಾ
ನನಗೆ ಕಾಟ ಕೊಡಲು ಶುರುವಿಟ್ಟಾಗ.
ಮೊಬೈಲಿನ ದೀಪ ಹೊತ್ತಿಸಿ
ಕೈಗೆ ಸಿಕ್ಕ ಪೇಪರು ಬಳಸಿ
ಕೈಬೀಸಿ ಜಾಡಿಸಿದಾಗ ಶತ್ರು
ಒಂದೇ ಹೊಡೆತಕ್ಕೆ ನೆಲಕಚ್ಚಿ ಬಿದ್ದು
ವಿಲವಿಲನೆ ಒದ್ದಾಡುವ ಸದ್ದು
ಕೇಳುತ್ತಿರಲು, ನಾನು ಯುದ್ಧ ಗೆದ್ದ
ಖುಷಿಯಲ್ಲಿ, ಹೊದ್ದು ನಿದ್ದೆ ಹೋದೆ.
ಬೆಳಗ್ಗೆ ಎದ್ದು ನೋಡುತ್ತೇನೆ:
ಪಕ್ಕದಲ್ಲೇ ಹೆಣ!
ಅದನ್ನು ಸಾಗಿಸಲು ಹೆಣ-
ಗಾಡುತ್ತಿರುವ ಇರುವೆಗಳ ಬಣ!
ಮಣಭಾರದ ಈ ದೇಹವನ್ನು
ಸಣಕಲು ಇರುವೆಗಳು ಹೇಗಾದರೂ
ಸಾಗಿಸುತ್ತವೋ ಎಂದು ಯೋಚಿಸುತ್ತಾ,
ರೂಮಿನ ಕಸ ಗುಡಿಸದೇ ಹಾಗೇ
ಆಫೀಸಿಗೆ ಬಂದೆ.
ಸಂಜೆ ರೂಮಿಗೆ ಮರಳಿ ನೋಡಿದರೆ
ಹೆಣವೂ ಇಲ್ಲ; ಇರುವೆಗಳೂ ಇಲ್ಲ!
ಏನಾಯಿತು ಹೋಗಿ ವಿಚಾರಿಸೋಣವೆಂದರೆ
ಅವುಗಳ ಗೂಡಿನ ವಿಳಾಸ ನನಗೆ ಗೊತ್ತಿಲ್ಲ
ನಾನು ಕೊಲೆಗಾರನೆಂಬ ಭಾವ ಆವರಿಸಿಕೊಳ್ಳತೊಡಗಿತು...
ಏಕೆ ಬಂದಿತ್ತು ಅದು ನನ್ನ ರೂಮಿಗೆ?
ಅದು ಸತ್ತ ಸುದ್ದಿ ಹೇಗೆ ತಿಳಿಯಿತೋ ಇರುವೆಗಳ ಟೀಮಿಗೆ?
ಬಾಳೆಕಾಯಿ ಶೆಟ್ಟಿ ಸತ್ತದ್ದೇನು ಸುದ್ದಿಯಲ್ಲ ಬಿಡಿ
ಕೊಲೆ ಮಾಡಿದ್ದಕ್ಕೆ ನನಗೆ ಯಾರೂ ತೊಡಿಸುವುದಿಲ್ಲ ಬೇಡಿ
ಗೂಡಿನಲ್ಲಿ ಇರುವೆಗಳೆಲ್ಲಾ ಘರಮ್ ಬಿರಿಯಾನಿ ಮಾಡಿ
ತಿಂದು ತೇಗಿರಬಹುದು;
ಆದರೆ ಅದಲ್ಲ ವಿಷಯ-
...ನಿನ್ನೆ ರಾತ್ರಿ ಬಂದ ನಿದ್ದೆ ಇವತ್ಯಾಕೆ ಬರುತ್ತಿಲ್ಲ ನನಗೆ?
(14.09.2006; ರಾತ್ರಿ 12:30)

Monday, September 11, 2006
ಬಿ.ಆರ್.ಎಲ್. -60: ಸಮಾರಂಭದ ವರದಿ!
ಬೆಂಗಳೂರು, ೧೦.೦೯.೨೦೦೬: 'ಬಿ. ಆರ್. ಲಕ್ಷ್ಮಣರಾವ್‍ಗೆ ೬೦ ತುಂಬಿದ ಪ್ರಯುಕ್ತ ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಅಭಿನಂದನಾ ಸಮಾರಂಭ' -ಎಂಬ ಸಾಲುಗಳನ್ನು ವಿಜಯ ಕರ್ನಾಟಕದಲ್ಲಿ ಓದುತ್ತಿದ್ದಂತೆ ಹೌಹಾರಿಬಿಟ್ಟೆ. ನಮ್ಮ ತುಂಟಕವಿ ಬಿ.ಆರ್.ಎಲ್. ಗೆ ಅರವತ್ತು ವರ್ಷ ವಯಸ್ಸಾಯಿತೇ? Impossible ! ಅದು ಹೇಗೆ ಸಾಧ್ಯ? ನನ್ನ ಅನುಮಾನವನ್ನು ಬಗೆಹರಿಸುವಂತೆ, ನಿಜವಾಗಿಯೂ ಅರವತ್ತಾಗಿದೆ ಎನ್ನುವಂತೆ ಸಾಪ್ತಾಹಿಕದಲ್ಲಿ ಜಯಂತ ಕಾಯ್ಕಿಣಿ ಬಿ.ಆರ್.ಎಲ್. ಕುರಿತು ಬರೆದ ಲೇಖನವೊಂದಿತ್ತು. ಅಭಿನಂದನಾ ಕಾರ್ಯಕ್ರಮಕ್ಕೆ ಬರಲಿರುವವರ list ನೋಡಿದೆ. ಈ ಕಾರ್ಯಕ್ರಮವನ್ನು ನಾನು attend ಮಾಡಲೇಬೇಕು ಅನ್ನಿಸಿತು. Movie ಗೆ ಹೋಗೋಣ ಎಂದು ಗೆಳೆಯರ ಜೊತೆ ಮಾತಾಡಿಕೊಂಡಿದ್ದವನು, ಅದನ್ನೆಲ್ಲಾ cancel ಮಾಡಿ, ಮಧ್ಯಾಹ್ನ ಮೂರರ ಹೊತ್ತಿಗೆ ಸೀದಾ ಕಲಾಕ್ಷೇತ್ರಕ್ಕೆ ನಡೆದೆ.
ಕಾರ್ಯಕ್ರಮವನ್ನು ಮೂರು ಚರಣಗಳಲ್ಲಿ ಆಯೋಜಿಸಿದ್ದರು. ಮೊದಲನೇ ಚರಣದಲ್ಲಿ ಬಿ.ಆರ್.ಎಲ್. ಬರಹಗಳ ಬಗ್ಗೆ ಗೋಷ್ಠಿ, ಎರಡನೇ ಚರಣದಲ್ಲಿ ಬಿ.ಆರ್.ಎಲ್.ರ ಹನಿಗವನಗಳ ಸಂಕಲನ, ಸಿಡಿ ಮತ್ತು mp3 ಬಿಡುಗಡೆ, ಮತ್ತು ಮೂರನೇ ಚರಣದಲ್ಲಿ ಲಕ್ಷ್ಮಣರಾಯರಿಗೆ ಅಭಿನಂದನೆ ಮತ್ತು ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ.
ಮೊದಲನೇ ಚರಣದಲ್ಲಿ ಭಾಗವಹಿಸಿದ್ದವರು ಡಾ ನರಹಳ್ಳಿ ಬಾಲಸುಬ್ರಹ್ಮಣ್ಯ, ಡಾ ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ, ಸುಬ್ರಾಯ ಚೊಕ್ಕಾಡಿ ಮತ್ತು ಎನ್.ಎಸ್. ರಂಗನಾಥ ರಾವ್. ನರಹಳ್ಳಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಂತರ ಲಕ್ಷ್ಮೀನಾರಾಯಣ ಭಟ್ಟರು ಬಿ.ಆರ್.ಎಲ್. ರವರ ಜೊತಿಗಿನ ತಮ್ಮ ಅವಿನಾಭಾವ ಸಂಬಂಧದ ಕುರಿತು ಹೇಳಿದರು. 'ಗೋಪಿ'ಗೆ 'ಕಡಿವಾಣ' ಹಾಕಲು ಅವರ ಮನೆಯವರು ಕೇಳಿಕೊಂಡಾಗ ಅವರಿಗೆ ಹೆಣ್ಣು ಹುಡುಕಿಕೊಟ್ಟವರು (ಸುಬ್ಬಾಭಟ್ಟರ ಮಗಳು!) ತಾವೇ ಎಂಬ ಸತ್ಯವನ್ನು ಬಹಿರಂಗಗೊಳಿಸಿದರು. ನಂತರ ಸುಬ್ರಾಯ ಚೊಕ್ಕಾಡಿ ಮಾತನಾಡಿ, ಬಿ.ಆರ್.ಎಲ್. ರ ಕಾವ್ಯದ ಬಗ್ಗೆ ಪಕ್ಷಿನೋಟ ಬೀರಿದರು. ತದನಂತರ ರಂಗನಾಥರಾವ್, ಬಿ.ಆರ್.ಎಲ್. ರ ಗದ್ಯದ ಕುರಿತು ಮಾತನಾಡಿದರು.
ಎರಡನೇ ಚರಣದಲ್ಲಿ, ಕವಿ-ಕತೆಗಾರ್ತಿ ಎಂ.ಆರ್. ಕಮಲ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಬಿ.ಆರ್.ಎಲ್. ರ ಹನಿಗವನಗಳ ಸಂಕಲನವನ್ನು ಬಿಡುಗಡೆ ಮಾಡಿದ ಚುಟುಕು ರತ್ನ ದುಂಡೀರಾಜ್, ಆ ಪುಸ್ತಕದಲ್ಲಿನ ಕೆಲ ಹನಿಗವಿತೆಗಳನ್ನು ಓದಿ ಹೇಳಿದರು. ಗಾಯಕ ಶಿವಮೊಗ್ಗ ಸುಬ್ಬಣ್ಣ ಭಾವಗೀತೆಗಳ ಸಿ.ಡಿ. ಬಿಡುಗಡೆ ಮಾಡಿ ಮಾತನಾಡಿ, ಸಿಡಿಯಲ್ಲಿರುವ ಗೀತೆಗಳನ್ನು ಪರಿಚಯಿಸಿದರು. 'ಹೇಳಿ ಹೋಗು ಕಾರಣ' mp3 ಬಿಡುಗಡೆ ಮಾಡಿದ ಮುದ್ದುಕೃಷ್ಣ ಅದರಲ್ಲಿರುವ ಹಾಡುಗಳ ಬಗ್ಗೆ ಹೇಳಿದರು.
ಚಹಾ ವಿರಾಮದ ನಂತರ ಶುರುವಾದ ಸಮಾರಂಭದ ಮೂರನೇ ಚರಣದಲ್ಲಿ ವೇದಿಕೆ ಮತ್ತಷ್ಟು ಗಣ್ಯ ವ್ಯಕ್ತಿಗಳಿಂದ ತುಂಬಿತ್ತು. ಅಭಿನಂದನಾ ಸಮಾರಂಭ ಸಮಿತಿಯ ಗೌರವಾಧ್ಯಕ್ಷತೆಯನ್ನು ವಹಿಸಿದ್ದ ಜಿ.ಎಸ್. ಶಿವರುದ್ರಪ್ಪ, ಕಾರ್ಯಕ್ರಮದ ಅಧ್ಯಕ್ಷರಾಗಿದ್ದ ಯು.ಆರ್. ಅನಂತಮೂರ್ತಿ, ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರವಿ ಬೆಳಗೆರೆ, ಎಚ್.ಎಸ್. ವೆಂಕಟೇಶಮೂರ್ತಿ, ಸಿ. ಅಶ್ವತ್ಥ್ ಮತ್ತಿತರ ನಡುವೆ ಬಿ.ಆರ್.ಎಲ್. ದಂಪತಿಗಳಿಗೆ ಅಭಿನಂದನೆ ಸಲ್ಲಿಸಿದ ದೃಶ್ಯ ತುಂಬಾ ಚೆನ್ನಾಗಿತ್ತು. ಅಭಿನಂದನಾ ಗ್ರಂಥ 'ಚಿಂತಾಮಣಿ'ಯನ್ನು ಲೋಕಾರ್ಪಣ ಮಾಡಲಾಯಿತು. ಎಚ್ಚೆಸ್ವಿ ಪ್ರಾಸ್ತಾವಿಕ ಮಾತುಗಳನ್ನಾಡಿ ತಮ್ಮ ಮತ್ತು ಲಕ್ಷ್ಮಣರಾಯರ ಸ್ನೇಹ ಸಂಬಂಧವನ್ನು ವಿವರಿಸಿದರು. ಕಾರ್ಯಕ್ರಮದುದ್ದಕ್ಕೂ ಸಿಕ್ಕ ಸಿಕ್ಕ ಕಾಗದಿಂದ ಗಾಳಿ ಬೀಸಿಕೊಳ್ಳುತ್ತ ಕುಳಿತಿದ್ದ ರವಿ ಬೆಳಗೆರೆ ತಮ್ಮ ಆಕರ್ಷಕ ಮಾತಿನಿಂದ ಚಪ್ಪಾಳೆ ಗಿಟ್ಟಿಸಿದರು. ಲಕ್ಷ್ಮಣರಾಯರ ಅನೇಕ ಭಾವಗೀತೆಗಳಿಗೆ ರಾಗ ಸಂಯೋಜಿಸಿ, ಹಾಡಿದ ಸಿ.ಅಶ್ವತ್ಥ್, ಬಿ.ಆರ್.ಎಲ್.ರ ಕಾವ್ಯ ತಮ್ಮನ್ನು ಸೆಳೆದಿದ್ದರ ಬಗ್ಗೆ ಹೇಳಿದರು. ಜಿ.ಎಸ್.ಎಸ್. ಅಭಿನಂದನಾ ಗ್ರಂಥದಲ್ಲಿರುವ ಹೂರಣವನ್ನು ಪ್ರೇಕ್ಷಕರಿಗೆ ಹಂಚಿದರು. ಯು.ಆರ್. ಅನಂತಮೂರ್ತಿ ಕನ್ನಡ ಸಾಹಿತ್ಯ ಸಂದರ್ಭದಲ್ಲಿ ಬಿ.ಆರ್.ಎಲ್. ರ ಮಹತ್ವವನ್ನು ಕೊಂಡಾಡಿದರು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ತುಂಟಕವಿ ಬಿ.ಆರ್.ಎಲ್., ತಮ್ಮ ಕಾವ್ಯರಚನೆಗೆ ಸ್ಪೂರ್ತಿಯಾದ, ನೆರವಾದ ಅನೇಕರನ್ನು ಈ ಸಂದರ್ಭದಲ್ಲಿ ನೆನೆದರು.
'ಕನ್ನಡವೇ ಸತ್ಯ' ಖ್ಯಾತಿಯ ಪ್ರಭಾಕರ್ ರಾವ್ ಸಹಕಾರದಲ್ಲಿ ಉಪಾಸನಾ ಮೋಹನ್ ಆಯೋಜಿಸಿದ್ದ ಈ ಕಾರ್ಯಕ್ರಮ ನಿಜಕ್ಕೂ ಚೆನ್ನಾಗಿತ್ತು, ಮನ ಮುಟ್ಟುವಂತಿತ್ತು. ಕೊಟ್ಟ ಕಾಫಿ ತುಂಬಾ ಬಿಸಿಯಿತ್ತು. ಎನ್.ಎಸ್. ರಂಗನಾಥರಾವ್ ಲಕ್ಷ್ಮಣರಾಯರ ಗದ್ಯದ ಕುರಿತು ಮಾತನಾಡುವಾಗ, ಜನಕ್ಕೆ ಅವರ ಗದ್ಯದ ಬಗ್ಗೆ ಹೆಚ್ಚು ಪರಿಚಯವಿಲ್ಲದ್ದರಿಂದ ಪ್ರೇಕ್ಷಕರು ಮಧ್ಯದಲ್ಲೇ ಚಪ್ಪಾಳೆ ಹೊಡೆದರು (ಆದರೂ ಅವರು ಮಾತು ನಿಲ್ಲಿಸಲಿಲ್ಲ!) -ಇಂಥ ಕೆಲವೊಂದು ಅಪಸವ್ಯಗಳು ಸಂಭವಿಸಿದ್ದು ಬಿಟ್ಟರೆ ಇಡೀ ಸಮಾರಂಭದಲ್ಲಿ ಕಿಕ್ಕಿರಿದು ನೆರೆದಿದ್ದ ಪ್ರ್‍ಏಕ್ಷಕರು ಭಾವನೆಗಳಲ್ಲಿ, ಖುಷಿಯಲ್ಲಿ, ನಗೆಗಡಲಿನಲ್ಲಿ ತೇಲುತ್ತಿದ್ದರು. ಸಮಾರಂಭದ ಪ್ರಯುಕ್ತ ಖ್ಯಾತ ಗಾಯಕರಿಂದ ಬಿ.ಆರ್.ಎಲ್. ರಚನೆಯ ಭಾವಗೀತೆಗಳ ಗಾಯನವೂ ಇತ್ತು.
ಹೊರಗೆ discount ನಲ್ಲಿ ಪುಸ್ತಕಗಳ ಮಾರಾಟ ಇತ್ತು. ನಾನು 'ಸುಬ್ಬಾಭಟ್ಟರ ಮಗಳೇ' ಪುಸ್ತಕ (ಬಿ.ಆರ್.ಎಲ್. ಇದುವರೆಗಿನ ಭಾವಗೀತೆಗಳ ಸಂಕಲನ) ಮತ್ತು 'ಹೇಳಿ ಹೋಗು ಕಾರಣ' mp3 ಕೊಂಡುಕೊಂಡೆ. ಪುಸ್ತಕದ ಮೇಲೆ ಲಕ್ಷ್ಮಣರಾಯರ ಹಸ್ತಾಕ್ಷರ ಪಡೆಯಲು ಹೆಣಗಿದೆನಾದರೂ ಕೊನೆಗೂ ಸಾಧ್ಯವಾಗಲಿಲ್ಲ. ಆ ನಿರಾಶೆ ದೂರಾದದ್ದು ರೂಮಿಗೆ ಮರಳಿ ರಾತ್ರಿಯಿಡೀ ಕುಳಿತು 'ಹೇಳಿ ಹೋಗು ಕಾರಣ' ಸಿಡಿಯಲ್ಲಿದ್ದ ಹಾಡುಗಳನ್ನು ಕೇಳಿಸಿಕೊಂಡಾಗಲೇ.
Thanx to BRL for all that...

Saturday, September 09, 2006
ಗ್ರಹಣ ಮತ್ತು ಚಂದ್ರ
ಎಲ್ಲೋ ಓದಿದ ನೆನಪು:
ಅವರವರ ಮನದಂತೆ ದೃಷ್ಟಿಯೂ ಬೇರೆ
ಕವಿಯ ಕಣ್ಣಿಗೆ ಚಂದ್ರ ಹೆಂಡತಿಯ ಮೋರೆ
ಮಕ್ಕಳಿಗೆ ಶಶಿ ಬಾಂದಳದ ಚೆಂಡು
ವಿಜ್ಞಾನಿಗಳಿಗೆ ಅದು ಬರೀ ಕಲ್ಲುಗುಂಡು
ಕವಿ ಯಾರೋ ನೆನಪಿಲ್ಲ. ಹೈಸ್ಕೂಲ್ ಕನ್ನಡ ಪಠ್ಯದಲ್ಲಿತ್ತು. ನಮ್ಮ ಮೇಷ್ಟ್ರು ಎಂ.ಜಿ. ಹೆಗಡೆ ಅದನ್ನು ಬಹಳ ಚೆನ್ನಾಗಿ ವಿವರಿಸಿದ್ದರು ಕೂಡ. ಹೇಗೆ ಒಬ್ಬೊಬ್ಬರ ದೃಷ್ಟಿಕೋನ ಒಂದೊಂದು ತರಹ ಇರುತ್ತೆ ಎಂಬುದನ್ನ ತುಂಬ ಸುಂದರವಾಗಿ, ಕೇವಲ ನಾಲ್ಕೇ ನಾಲ್ಕು ಸಾಲುಗಳಲ್ಲಿ ಬಿಚ್ಚಿಡುತ್ತದೆ ಆ ಕವನ.
ಇಲ್ಲ, ನಾನಿವತ್ತು ಕವಿತೆಗಳ ಬಗ್ಗೆಯಾಗಲೀ, ದೃಷ್ಟಿಕೋನಗಳ ಬಗ್ಗೆಯಾಗಲೀ, ಬೇರೆ ಬೇರೆ ದೃಷ್ಟಿಕೋನಗಳ ಜನಗಳ ಬಗ್ಗೆಯಾಗಲೀ ಹೇಳುವುದಕ್ಕೆ ಹೊರಟಿಲ್ಲ. ನಾನು ಹೇಳ ಹೊರಟಿರುವುದು ಚಂದಿರನ ಬಗ್ಗೆ.
ಚಂದಿರ. ಅದೆಷ್ಟು ಚಂದದ ಹೆಸರು. ಅದೆಷ್ಟು ಸುಂದರ ಅಂವ. ಚಂದಿರ ಎಂದರೆ ಬೆಳದಿಂಗಳು. ಬೆಳದಿಂಗಳು ಎಂದರೆ ಪ್ರೀತಿ. ಪ್ರೀತಿ ಎಂದರೆ ಅವಳು. ಅವಳು ಎಂದರೆ ಪ್ರೀತಿ.
ಚಂದ್ರ ಎಂದರೆ, ಭಾವನೆಗಳನ್ನು ಸ್ಪುರಿಸುವ ಕೇಂದ್ರ ನನ್ನ ಪಾಲಿಗೆ. ಹುಣ್ಣಿಮೆಯ ರಾತ್ರಿ ಲಕ್ಷ ನಕ್ಷತ್ರಗಳ ನಡುವೆ ತಾನೇ ತಾನಾಗಿ ಮೆರೆಯುವ ಮನ್ಮತ. ಕಪ್ಪು ಕಡಲಲ್ಲಿ ಬೆಳ್ಳಿತುಂಡಿನಂತೆ ತೇಲುವವ. ಹೊಟ್ಟೆಕಿಚ್ಚಾಗೊತ್ತೆ ಅವನನ್ನು ನೋಡಿದರೆ.
ಲೆಕ್ಕ ಇಟ್ಟಿಲ್ಲವಂತೆ ಚಂದ್ರ: ಅದೆಷ್ಟೋ ಮಕ್ಕಳಿಗೆ ಮಾಡಿಸಿದ ಊಟ. ನನಗೆ ಅಮ್ಮನೂ ಹಾಗೇ ಊಟ ಮಾಡಿಸುತ್ತಿದ್ದಿದ್ದಂತೆ. ಚಂದ್ರನಿಗೊಂದು ತುತ್ತು - ನಿನಗೊಂದು ತುತ್ತು ಅಂತ ಹೇಳಿ, ಚಂದ್ರನಿಗೆ ಕೊಟ್ಟಂತೆ ಮಾಡಿ, ನಾನು ಬೆರಗುಗಣ್ಣುಗಳಲ್ಲಿ ಮೇಲ್ನೋಡುತ್ತಿರುವಾಗ, ತೆರೆದ ಬಾಯಿಗೆ ತುತ್ತು ತುರುಕಿ... ಹೀಗೇ ಅದೆಷ್ಟು ತಾಯಂದಿರು ಉಣ್ಣಿಸಿದ ತುತ್ತು ತಿಂದಿದ್ದಾನೋ ಚಂದ್ರ. ಅದಕ್ಕೇ ಅಷ್ಟು ಸ್ಮಾರ್ಟ್ ಅಂವ. ಆದರೆ ಅದು ವಿಚಿತ್ರವೂ ಹೌದು: ಅಷ್ಟೊಂದು ಮನೆಯ ಅಡಿಗೆ ಉಂಡು ಅವನ ಹೊಟ್ಟೆ ಕೆಟ್ಟು ಹೋಗಬೇಕಿತ್ತು! ಆದರೆ ಎಂದೂ ಅಂವ ಕಾಯಿಲೆ ಬಿದ್ದ ವರ್ತಮಾನ ಬಂದಿಲ್ಲ!
ನಿನ್ನೆ ರಾತ್ರಿ ಎಲ್ಲ ರಾತ್ರಿಗಳಂತಲ್ಲ. ನನ್ನ ಗೆಳೆಯ ಚಂದ್ರನಿಗೆ ಗ್ರಹಣ. ಬಿಚ್ಚು ಆಕಾಶದಲ್ಲಿ ನಕ್ಷತ್ರಗಳ ಜಾತ್ರೆ ನೆರೆದಿತ್ತು.. ಕಪ್ಪು ಕಡಲಲ್ಲಿ ತೇಲಿಬಂದ ನನ್ನ ಗೆಳೆಯ.. ಮೇಲೆ ಮೇಲೆ ಬಂದ.. ರಾತ್ರಿ ಹತ್ತೂ ವರೆಯಾಗಿತ್ತೇನೋ: ನಿಧ ನಿಧಾನವಾಗಿ ಅವನ ಒಂದು ಪಾರ್ಶ್ವದಿಂದ ಕಪ್ಪು ಆವರಿಸುತ್ತಾ ಬಂತು... ತುಂಬು ಚಂದಿರನ ಮೇಲ್ಮೈಯ ಮೇಲೆ ಯಾರದೋ ಕಪ್ಪು ನೆರಳು.. ನನಗೆ ಬೇಸರ..
ದುಂಡೀರಾಜರ ಕವನವೊಂದು ಬಿಟ್ಟೂ ಬಿಡದೆ ನೆನಪಾಗುತ್ತಿತ್ತು:
ನಾಚುತ್ತಾ ಆಕೆ
ಎದೆಯ ಮೇಲಿನ ಹೊದಿಕೆ
ಬದಿಗೆ
ಸರಿಸುತ್ತಾ ಹೋದ ಹಾಗೆ
ಪಾಡ್ಯ, ಬಿದಿಗೆ, ತದಿಗೆ..
'ಹುಣ್ಣಿಮೆ' ಎಂಬ ಶೀರ್ಷಿಕೆಯಡಿ ಅದೆಷ್ಟು ಅದ್ಭುತವಾಗಿ ಬರೆದಿದ್ದಾರೆ ಕವಿ! ನಾನು ಚಂದಿರನನ್ನು ನೋಡುತ್ತಾ ಹಾಗೇ ಟೆರೇಸಿನಲ್ಲಿ ಅಡ್ಡಾಡುತ್ತಿದ್ದೆ ಮಧ್ಯರಾತ್ರಿಯವರೆಗೂ. ಒಂದು ಗಂಟೆಯ ಮೇಲೆ ಗ್ರಹಣ ಬಿಟ್ಟಿತು. ನನ್ನನ್ನು ಕವಿದಿದ್ದ ಖಿನ್ನತೆಯೂ ಕಳೆದಂತಾಯ್ತು.

Subscribe to:
Posts (Atom)